ಮೈಸೂರು: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ನಮ್ಮನ್ನು ಬೆಳೆಸಿಲ್ಲ. ನಾವು ಮೊದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು, ಆಮೇಲೆ ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮನ್ನು ಬೆಳೆಸಿದ್ದೇನೆ ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿದ್ದರು. ಆದರೆ ಅವರು ನಮ್ಮನ್ನು ನೂರಕ್ಕೆ ನೂರರಷ್ಟು ಬೆಳೆಸಿಲ್ಲ. ನಾವು ಸಿದ್ದರಾಮಯ್ಯ ಅವರಿಗಿಂತ ಮೊದಲೇ ಕಾಂಗ್ರೆಸ್ ಪಕ್ಷದಲ್ಲಿದ್ದವರು. ನಂತರ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಬಂದರು. ನಾವು ಸಿದ್ದರಾಮಯ್ಯ ಅವರ ಮೇಲೆ ಮುನಿಸಿಕೊಂಡು ಪಕ್ಷ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಆದ ಅವಮಾನ, ಅನಾಹುತಗಳಿಂದ ಪಕ್ಷ ಬಿಟ್ಟೆವು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ನಮಗಾದ ನೋವನ್ನು ಸರಿಪಡಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.