ಕರ್ನಾಟಕ

karnataka

ETV Bharat / state

ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ: ಸಚಿವ ಸೋಮಶೇಖರ್ - Mysore District Minister in charge

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಚರ್ಚೆ ನಡೆದಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

dsd
ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

By

Published : Sep 18, 2020, 2:00 PM IST

ಮೈಸೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಆದರೆ ರಾಜಕೀಯವಾಗಿ ಈ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸಚಿವ ಎಸ್.ಟಿ.ಸೋಮಶೇಖರ್

ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಈ‌ ಕುರಿತು ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಾರಿ ದಸರಾ ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಿದ್ದು, ಸರಳ ದಸರಾದಲ್ಲಿ ಯಾವುದೇ ದುಂದು ವೆಚ್ಚಕ್ಕೆ ಅವಕಾಶವಿಲ್ಲ. ದಸರಾ ಉದ್ಘಾಟಕರನ್ನು ಆಯಾ ಇಲಾಖೆಯ ಅಧಿಕಾರಿಗಳೇ ಆಯ್ಕೆ ಮಾಡುತ್ತಾರೆ. ಮುಖ್ಯ ಉದ್ಘಾಟಕರನ್ನು ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಪ್ರತೀ ವರ್ಷದಂತೆ ಈ ವರ್ಷವೂ ಸಹ ರಾಜಮನೆತನದವರಿಗೆ ಸಾಂಪ್ರದಾಯಿಕವಾಗಿ ಗೌರವಧನ‌ ನೀಡಿ ಸರಳ ದಸರಾಕ್ಕೆ ಆಹ್ವಾನ ನೀಡಲಾಗುವುದು ಎಂದರು.

ಕೊರೊನಾ ಸಂಬಂಧ ನಾನು ಪ್ರತಿದಿನ ಡಿಹೆಚ್ಒ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಡೆತ್ ರೇಟ್ ಕಡಿಮೆಯಾಗಿದ್ದು, ಈಗ ಪ್ರತಿದಿನ ಬೇರೆ ಬೇರೆ ಜಿಲ್ಲೆಯಿಂದ ಚಿಕಿತ್ಸೆಗೆ ಬಂದವರು ಇಲ್ಲಿ ಮೃತಪಟ್ಟಿದ್ದಾರೆ. ಇದರ ಬಗ್ಗೆಯೂ ಸಹ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ABOUT THE AUTHOR

...view details