ಕರ್ನಾಟಕ

karnataka

ETV Bharat / state

ರಾಮದಾಸ್ ಅವರ ಅರೋಗ್ಯ ವಿಚಾರಿಸಿದ ಸಚಿವ ವಿ.ಸೋಮಣ್ಣ - Minister V. Somanna

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Minister V. Somanna visite
ರಾಮದಾಸ್ ಅವರ ಅರೋಗ್ಯ ವಿಚಾರಿಸಿದ ಸಚಿವ ವಿ.ಸೋಮಣ್ಣ

By

Published : Feb 15, 2020, 9:09 PM IST

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕ ಎಸ್.ಎ.ರಾಮದಾಸ್ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆ ಬಳಿಕ ತಮ್ಮ ಗೋಕುಲಂನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.

ಬಳಿಕ ಮಾತನಾಡಿದ ಅವರು, ರಾಮದಾಸ್ ಅವರು ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದು, ದಿಟ್ಟ ಹೋರಾಟಗಾರರಾಗಿದ್ದಾರೆ. ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಈಗಾಗಲೇ ಅಗತ್ಯ ಚಿಕಿತ್ಸೆಯನ್ನು ಪಡೆದಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಲವಲವಿಕೆಯಿಂದ ಮಾತನಾಡಿದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಜಿ.ಟಿ.ದೇವೇಗೌಡ, ಸಂಸದ ಪ್ರತಾಪಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details