ಕರ್ನಾಟಕ

karnataka

ETV Bharat / state

ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಮತ್ತು ಹೆಚ್​​ಡಿಕೆ ಕಾರಣ: ಜಿ.ಟಿ. ದೇವೇಗೌಡ - ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಜಿಟಿಡಿ ಹೇಳಿಕೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

MLA G T DeveGowda statement on the fall of the alliance government
ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಜಿಟಿಡಿ ಹೇಳಿಕೆ

By

Published : Dec 20, 2020, 12:30 PM IST

ಮೈಸೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಹಾಗೂ ಹೆಚ್‌.ಡಿ. ಕುಮಾರಸ್ವಾಮಿ ಇಬ್ಬರೂ ಕಾರಣವೆಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಸಿದ್ದಲಿಂಗಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು. ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಕ್ಕೆ ಹೋಗಿ ಕುಳಿತುಕೊಂಡರು. ಶಾಸಕರು ಬಿಟ್ಟು ಹೋಗ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ತಡೆಯಬಹುದಿತ್ತು. ಆದರೆ ತಡೆಯುವ ಪ್ರಯತ್ನ ಮಾಡಲಿಲ್ಲ. ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣೀಕರ್ತರು‌ ಎಂದರು.

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಜಿಟಿಡಿ ಪ್ರತಿಕ್ರಿಯೆ

ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲು ಮರ್ಮಾಘಾತ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ. ದೇವೇಗೌಡ ಅವರು, ಸಿದ್ದರಾಮಯ್ಯ ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಮೊದಲು ವರುಣ, ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲೂಕು ಬೋರ್ಡ್ ಮೆಂಬರ್‌ಯಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು. ವರುಣ ಕ್ಷೇತ್ರವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು. ಆದರೆ ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದರು.

ಇದನ್ನು ಓದಿ :'ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲಿಗೆ ಯಾರು ಕಾರಣ ಎಂಬುದು ಗೊತ್ತು'

ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂಬ ವಿಚಾರ ಕುರಿತು ಮಾತನಾಡಿ, ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8,000 ಮತ ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು. ಬಿಜೆಪಿ15,000 ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ವೋಟ್ ಪಡೆದುಕೊಂಡಿದೆ. ಪರೋಕ್ಷವಾಗಿ ಜೆಡಿಎಸ್- ಬಿಜೆಪಿ ಒಳ ಒಪ್ಪದ ಆಗಿದೆ ಎಂಬುದನ್ನು ಜಿ.ಟಿ.ಡಿ ಅಲ್ಲಗೆಳೆದರು.

ABOUT THE AUTHOR

...view details