ಕರ್ನಾಟಕ

karnataka

ETV Bharat / state

ಲೋಕಸಭಾ ಚುನಾವಣೆ ವೇಳೆ 'ಕೈ'ನಿಂದ ದುಡ್ಡು ಪಡೆದಿದ್ರೆ ರಾಜಕೀಯ ನಿವೃತ್ತಿ : ಜಿ ಟಿ ದೇವೇಗೌಡ - ಕೈ ಮತ್ತು ದಳ ಕಾರ್ಯಕರ್ತರಿಗೆ ಹೊಂದಾಣಿಕೆ

ಚುನಾವಣೆಯಲ್ಲಿ ನಾನು ಹಣಕಾಸಿನ ವ್ಯವಹಾರ ಮಾಡಿಲ್ಲ. ಸ್ಪಷ್ಟವಾಗಿ ಆತ್ಮಸಾಕ್ಷಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ..

mla-gt-devegowda-talk
ಶಾಸಕ ಜಿ.‌ಟಿ ದೇವೇಗೌಡ

By

Published : Dec 1, 2020, 4:45 PM IST

ಮೈಸೂರು :ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದುಡ್ಡು ಪಡೆದಿರುವುದು ಸಾಬೀತಾದ್ರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಜಿ‌ ಟಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಟಿಡಿ ಹಣ ಪಡೆದಿದ್ದಾರೆಂದು, ಸಿದ್ದರಾಮಯ್ಯ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಜಿ ಟಿ ದೇವೇಗೌಡ ಏನು ಅಂತಾ 25 ವರ್ಷದಿಂದ ಗೊತ್ತಿದೆ. ವರ್ಗಾವಣೆ, ಕಾಮಗಾರಿ, ಚುನಾವಣೆಯಲ್ಲಿ ದುಡ್ಡು ತೆಗೆದುಕೊಂಡಿರುವುದು ತೋರಿಸಲಿ ನಾನು ರಾಜಕಾರಣದಲ್ಲೇ ಇರುವುದಿಲ್ಲ ಎಂದು ಸವಾಲು ಹಾಕಿದರು.

ಚುನಾವಣೆಯಲ್ಲಿ ನಾನು ಹಣಕಾಸಿನ ವ್ಯವಹಾರ ಮಾಡಿಲ್ಲ. ನಾನು ವೈಯಕ್ತಿಕವಾಗಿ ಹಣ ಕೊಟ್ಟು, ಹಣ ನೀಡಿಲ್ಲ. ಸ್ಪಷ್ಟವಾಗಿ ಆತ್ಮಸಾಕ್ಷಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ನಾನು ಸಿದ್ದರಾಮಯ್ಯ ಅವರಿಂದ ಹಣ ಪಡೆದಿರುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ವಿವರಣೆ ನೀಡಬೇಕು ಎಂದರು.

ಶಾಸಕ ಜಿ‌.ಟಿ ದೇವೇಗೌಡ

ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು, ಮಂಡ್ಯ, ತುಮಕೂರಿನ ಸೋಲು ಅನುಮಾನಗಳಿಗೆ ಕಾರಣವಾಗಿತ್ತು. ಇದು ಜನರು ಅಭ್ಯರ್ಥಿಗಳನ್ನು ಸೋಲಿಸಿದ್ದು, ಹಣ ಅಲ್ಲ. ಸ್ಥಳೀಯ ಮಟ್ಟದಲ್ಲಿ ಕೈ ಮತ್ತು ದಳ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಲಿಲ್ಲ. ದಿಢೀರ್ ಹೊಂದಾಣಿಕೆ ಆದ್ದರಿಂದ ಅದು ಕೆಲಸ ಮಾಡಲಿಲ್ಲ‌ ಎಂದರು.

ಕಲುಷಿತ ರಾಜಕಾರಣ :ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲಾ ಕಡೆ ರಾಜಕಾರಣ ಕಲುಷಿತಗೊಂಡಿದೆ. ಜೆಡಿಎಸ್‌ನಿಂದ ಗೆದ್ದಿದ್ದೇನೆ, ಅದರಲ್ಲೇ ಇದ್ದೇನೆ. ಮುಂದೆ ಜೆಡಿಎಸ್‌ನಲ್ಲಿ ಉಳಿದರು ಅಚ್ಚರಿಯಿಲ್ಲ, ಅವರ ನಡುವಳಿಕೆಯನ್ನ ನೇರವಾಗಿ ಹೇಳಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕೆಟ್ವಿ, ಜಿಟಿಡಿ ಹಣ ತಗೊಂಡು ಮೋಸ ಮಾಡಿದ: ಸಭೆಯಲ್ಲಿ ಸಿದ್ದು ಆರೋಪ?

ABOUT THE AUTHOR

...view details