ಮೈಸೂರು: ಮಾಜಿ ಶಾಸಕ ಕೆ. ವೆಂಕಟೇಶ್ ಅವರ ಹಿಂಬಾಲಕರು ಅಪಪ್ರಚಾರ ಮಾಡುವುದನ್ನು ಮೊದಲು ನಿಲ್ಲಿಸಲಿ ಎಂದು ಶಾಸಕ ಕೆ. ಮಹದೇವ್ ಗರಂ ಆಗಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಹಾಗೂ ಕೊತ್ತುವಳಿ ಕೊಪ್ಪಲು ಗ್ರಾಮಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಸುಮಾರು 1.2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಮಾಜಿ ಶಾಸಕ ಕೆ. ವೆಂಕಟೇಶ್ ಹಣ ಬಿಡುಗಡೆ ಮಾಡಿಸಿದ್ದಾರೆ ಎಂದು ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹೊಲದಪ್ಪ ಎಲ್ಲ ಕಡೆ ಅಪಪ್ರಚಾರ ಮಾಡುತ್ತಿದ್ದಾರೆ, ಇದು ಅವರಿಗೆ ಶೋಭೆ ತರುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.