ಮೈಸೂರು:ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು, ಶಾಸಕರು ಹಾಗೂ ಮುಖಂಡರಿಗೂ ಆತಂಕ ಎದುರಾಗಿದೆ.
ಶಾಸಕ ರಾಮದಾಸ್ಗೆ ಕೊರೊನಾ: ಸಚಿವ, ಶಾಸಕರಿಗೆ ನಡುಕ - ಮೈಸೂರು ಸುದ್ದಿ
ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ ಶಾಸಕ ರಾಮದಾಸ್ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಬಳಿಕ ಅವರು ಸ್ಯಾಂಪಲ್ ನೀಡಿದ್ದರು. ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ, ಇಂದು ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಮುಡಾ ಅಧ್ಯಕ್ಷ ರಾಜೀವ್, ಮೇಯರ್ ರುಕ್ಮಿಣಿ ಮಾದೇಗೌಡ, ಡಿಸಿ ರೋಹಿಣಿ ಸಿಂಧೂರಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ರಾಮದಾಸ್ಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಇವರೆಲ್ಲರಿಗೂ ಆತಂಕ ಶುರುವಾಗಿದೆ.