ಮೈಸೂರು :ಮೇಯರ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡಿಲ್ಲ. ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ಸಮಂಜಸವಾದ ಉತ್ತರ ಕೊಡುವೆ ಎಂದು ಎನ್ ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದರು.
ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಮುವಾದಿ ಶಕ್ತಿಗಳನ್ನು ದೂರ ಇಡಬೇಕು ಎನ್ನುವ ಉದ್ದೇಶದಿಂದ ಮೇಯರ್ ಸ್ಥಾನ ಅವರಿಗೆ ಬಿಟ್ಟು ಕೊಡಲಾಗಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ, ಪಕ್ಷ ವಿರೋಧಿಯಾಗಿ ನಾನು ನಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.