ಮೈಸೂರು:ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರನ್ನು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
9 ದಿನಗಳ ಬಳಿಕ ಹಲ್ಲೆಗೊಳಗಾಗಿದ್ದ ಶಾಸಕ ಆಸ್ಪತ್ರೆಯಿಂದ ಡಿಸ್ಚಾರ್ಜ್...! - 9 ದಿನಗಳ ನಂತರ ಆಸ್ಪತ್ರೆಯಿಂದ ಮನೆಗೆ ತೆರಳಿದ ತನ್ವೀರ್
ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ರನ್ನು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್..
ನವೆಂಬರ್ 17 ರ ರಾತ್ರಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಶಾಸಕ ತನ್ವೀರ್ ಸೇಠ್ ಭಾಗಿಯಾಗಿದ್ದರು. ಈ ವೇಳೆ ಶಾಸಕ ತನ್ವೀರ್ ಸೇಠ್ ಮೇಲೆ ಫಾರ‍್ಹನ್ ಪಾಷಾ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ ಸಿಕ್ಕಿ ಬಿದ್ದಿದ್ದ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ತನ್ವೀರ್‌ಸೇಠ್ ಅವರು ಹಲ್ಲೆಯಿಂದ ತೀವ್ರ ಬಳಲಿದ್ದರು. ಹೀಗಾಗಿ ಅವರನ್ನು ನೋಡಲು ಅನೇಕ ರಾಜಕೀಯ ಮುಖಂಡರು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಇದೀಗ 9 ದಿನಗಳ ನಂತರ ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದಾರೆ.
TAGGED:
mla tanveer seth