ಕರ್ನಾಟಕ

karnataka

ETV Bharat / state

ಮೈಸೂರು ಮೇಯರ್ ಚುನಾವಣೆ.. ಜೆಡಿಎಸ್ ಜತೆ ಮೈತ್ರಿಗೆ ಕಾಂಗ್ರೆಸ್ ವರಿಷ್ಠರ ಸೂಚನೆ : ಶಾಸಕ ತನ್ವೀರ್ ಸೇಠ್ - mysore mayor election

ಈ ಬಾರಿ ಮೇಯರ್ ಸ್ಥಾನ ಕಾಂಗ್ರೆಸ್​ಗೆ ಬಿಟ್ಟು ಕೊಡಬೇಕು. ಮೇಯರ್ ಚುನಾವಣೆಗೆ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮುಂದೆವರಿಯಲಿದೆ..

ಶಾಸಕ ತನ್ವೀರ್ ಸೇಠ್
ಶಾಸಕ ತನ್ವೀರ್ ಸೇಠ್

By

Published : Aug 24, 2021, 8:54 PM IST

ಮೈಸೂರು :ಮೇಯರ್ ಚುನಾವಣೆಗೆ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಮೇಯರ್ ಸ್ಥಾನ ಕಾಂಗ್ರೆಸ್​ಗೆ ಬಿಟ್ಟು ಕೊಡಬೇಕು. ಈ ಸಂಬಂಧ ಶಾಸಕ ಸಾ ರಾ ಮಹೇಶ್ ಜೊತೆ ಕೂಡ ಮಾತನಾಡಿದ್ದೇನೆ. ಅವರು ಕೂಡ ತಮ್ಮ ತೀರ್ಮಾನ ಹೇಳಲಿದ್ದಾರೆ ಎಂದಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮುಂದುವರಿಯಲಿದೆ. ಈ ವಿಚಾರದಲ್ಲಿ ವರಿಷ್ಠರು ನೀಡಿದ ಸೂಚನೆ ಪಾಲಿಸುತ್ತೇನೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಜಮೀರ್ ಅಹಮ್ಮದ್ ಅವರ ನಿವಾಸದ ಮೇಲೆ ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಪ್ರಕಾರ ಜಮೀರ್ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಕಾನೂನಿನಲ್ಲಿ ಯಾರು ಯಾರಿಗೆ ಜವಾಬ್ದಾರಿ ಇರುತ್ತೆ ಅದರಂತೆ ಕೆಲಸ ಮಾಡುತ್ತಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದರು.

ABOUT THE AUTHOR

...view details