ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಿರುವುದರಿಂದ ಬೆಂಗಳೂರನ್ನು ನಾಲ್ಕು ವಾರಗಳ ಕಾಲ ಲಾಕ್ಡೌನ್ ಮಾಡಿ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸಿಎಂಗೆ ಮನವಿ ಮಾಡಿದ್ದಾರೆ.
ಬೆಂಗಳೂರನ್ನು ನಾಲ್ಕು ವಾರ ಲಾಕ್ಡೌನ್ ಮಾಡಿ: ಸಿಎಂಗೆ ಶಾಸಕ ಯತೀಂದ್ರ ಮನವಿ - lockdown
ಬೆಂಗಳೂರನ್ನು ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಬೇಕು. ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಲಾಕ್ಡೌನ್ ಮಾಡಿಲ್ಲ ಎಂದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ. ಅಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ಕಾರಣ ಜನರು ಗ್ರಾಮಗಳತ್ತ ತೆರಳುತ್ತಿದ್ದಾರೆ. ಹೀಗಾಗಿ ಗ್ರಾಮಗಳಲ್ಲೂ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದರು.
ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುವುದಿಲ್ಲ. ನನ್ನ ವರುಣ ಕ್ಷೇತ್ರದಲ್ಲೂ ನಾಲ್ಕು ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಇದರ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.