ಮೈಸೂರು:ನಾಯಕತ್ವ ಬದಲಾವಣೆ ಬಗ್ಗೆ ಸತತ ಹೇಳಿಕೆ ನೀಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಖಾಸಗಿ ಹೋಟೆಲ್ನಲ್ಲಿ ಗುಪ್ತ ಮಾತುಕತೆ ನಡೆಸಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಖಾಸಗಿ ಹೋಟೆಲ್ನಲ್ಲಿ ಯತ್ನಾಳ್-ಹಳ್ಳಿಹಕ್ಕಿ ಗೌಪ್ಯ ಮಾತುಕತೆ - ಯತ್ನಾಳ್-ಹೆಚ್ ವಿಶ್ವನಾಥ್ ಗೌಪ್ಯ ಮಾತುಕತೆ
ಇಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಖಾಸಗಿ ಹೋಟೆಲ್ನಲ್ಲಿ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ. ಇದು ರಾಜಕೀಯವಾಗಿ ಕುತೂಹಲ ಮೂಡಿಸಿದೆ.

ಯತ್ನಾಳ್-ಹಳ್ಳಿಹಕ್ಕಿ ಗೌಪ್ಯ ಮಾತುಕ
ಖಾಸಗಿ ಹೋಟೆಲ್ನಲ್ಲಿ ಯತ್ನಾಳ್-ಹಳ್ಳಿಹಕ್ಕಿ ಗೌಪ್ಯ ಮಾತುಕತೆ
ಇಂದು ಬೆಳಿಗ್ಗೆ ಶಾಸಕ ಯತ್ನಾಳ್ ಚಾಮುಂಡಿ ತಾಯಿಯ ದರ್ಶನ ಪಡೆದು ಮುಖ್ಯಮಂತ್ರಿ ಹಾಗೂ ಅವರ ಮಗನ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಳಿಕ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ದೇವನೂರು ಮಠ ಹಾಗೂ ನಗರದ ಹೊಸಮಠಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ನಂತರ ಸಂಜೆ ಹಳ್ಳಿಹಕ್ಕಿ ಜೊತೆ ಖಾಸಗಿ ಹೋಟೆಲ್ನಲ್ಲಿ ಗುಪ್ತ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಗರದ ಖಾಸಗಿ ಹೋಟೆಲ್ ಭೇಟಿ ರಾಜಕೀಯವಾಗಿ ಕುತೂಹಲ ಮೂಡಿಸಿದೆ.
Last Updated : Jul 5, 2021, 7:15 PM IST