ಮೈಸೂರು: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಅವರ ಬೆಂಬಲಿಗೆ ಶಾಸಕರು ಹೇಳಿಕೆ ನೀಡುತ್ತಿದ್ದಾರೆ. ಅದು ಅವರವರ ವೈಯಕ್ತಿಕ ಅಭಿಪ್ರಾಯ, ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪ್ರಭಾವ ಬೀರಲ್ಲ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ತಿ.ನರಸೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಂದಿನ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದರು. ಈಗಾಗಲೇ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವೇದಿಕೆ ಮತ್ತು ಸಭೆಗಳಲ್ಲಿ ಈ ವಿಚಾರ ತಿಳಿಸಿಲ್ಲ ಎಂದರು.