ಮೈಸೂರು: ಆಕ್ಸಿಜನ್ ಸಮಸ್ಯೆಯಿಂದ ಜನರು ಸತ್ತಿದ್ದಾರೆ ಎಂದರೆ ಜನಪ್ರತಿನಿಧಿಗಳಾದ ನಮಗೆ ನಾಚಿಕೆಯಾಗಬೇಕು ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಹಣಕಾಸು ಪರಿಸ್ಥಿತಿ ಸುಧಾರಣೆಯಾಗಿಲ್ಲ. ಶಾಸಕರ ಅನುದಾನ ಬಿಡುಗಡೆ ಮಾಡುವುದು ಅನುಮಾನವಾಗಿದೆ. ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಬೇಕು. ಕಾರ್ಖಾನೆಯ ಮಾಲೀಕರು ಹಾಗೂ ಉದ್ಯಮಿಗಳು ಸಹಕಾರ ನೀಡಿ, ಜನರ ರಕ್ಷಣೆಗಾಗಿ ಸರ್ಕಾರದೊಂದಿಗೆ ಕೈಜೋಡಿಸಲು ಮುಂದೆ ಬನ್ನಿ ಎಂದು ಮನವಿ ಮಾಡಿದರು.
ಆಕ್ಸಿಜನ್ ಸಮಸ್ಯೆ ಕುರಿತು ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿ, ದೇಶದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೊನಾ ಆರ್ಭಟಿಸುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲು - ರಾತ್ರಿ ತಮ್ಮ ಜೀವವನ್ನು ಲೆಕ್ಕಿಸದೇ ಜನರ ಸೇವೆ ಮಾಡುತ್ತಿದ್ದಾರೆ ಎಂದರು.
ಕೋವಿಡ್ ಪರಿಸ್ಥಿತಿ ಕುರಿತು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾಹಿತಿ ನಂಜನಗೂಡು ತಾಲೂಕಿನಲ್ಲಿ ಆಕ್ಸಿಜನ್ ಪ್ಲಾಂಟ್ ಅವಶ್ಯಕತೆ ಇದೆ. ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಕಾರ್ಖಾನೆ ಮಾಲೀಕರ ಸಹಕಾರ ಮುಖ್ಯವಾಗಿದೆ. ಕಾರ್ಖಾನೆಯ ಮಾಲೀಕರು ಆ್ಯಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ:ನನಗೆ ಬಂದ ಅಧಿಕಾರ ಅಲ್ಲ, ಸಚಿವರು ಸೂಚನೆ ನೀಡಿದ್ದಕ್ಕೆ ಕೆಲಸ ಮಾಡುತ್ತಿದ್ದೇನೆ: ರಾಮದಾಸ್