ಮೈಸೂರು:ನಾನು ಸಚಿವ ಸ್ಥಾನದ ರೇಸ್ನಲ್ಲಿ ಇಲ್ಲ. ಮೈಸೂರು ಭಾಗಕ್ಕೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯತ್ನಲ್ಲಿ ಸಚಿವರ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದರು.