ಮೈಸೂರು:ನಾಡಹಬ್ಬ ದಸರಾ ಸಂದರ್ಭದಲ್ಲಿ ನಗರಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದರಿಂದ, ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪಾಲಿಕೆ ವತಿಯಿಂದ ಮೊಬೈಲ್ ತಂಡಗಳನ್ನು ರಚಿಸಿದೆ.
ಪ್ರವಾಸಿಗರ ಆಗಮನದ ಹಿನ್ನೆಲೆ ಕೋವಿಡ್ ಟೆಸ್ಟ್ಗಾಗಿ ಮೊಬೈಲ್ ತಂಡ ಆರಂಭಿಸಿದ ಪಾಲಿಕೆ
ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪಾಲಿಕೆ ವತಿಯಿಂದ ಮೊಬೈಲ್ ತಂಡವನ್ನು ರಚಿಸಿದ್ದು, ಕೋವಿಡ್ ಪರೀಕ್ಷೆಗೆ ಮಾಡಿಸಿಕೊಳ್ಳಲು ಕೂಡಲೇ ನಗರ ಪಾಲಿಕೆಯ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಮಾಡಿಸಿಕೊಳ್ಳಬಹುದಾಗಿದೆ.
ಪಾಲಿಕೆ
ನಗರದ ವಿವಿಧ ಫ್ಯಾಕ್ಟರಿ, ವಾಣಿಜ್ಯ, ಕೈಗಾರಿಕಾ ಉದ್ಯಮಗಳು, ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಇಚ್ಛಿಸಿದ್ದಲ್ಲಿ ಕೂಡಲೇ ನಗರ ಪಾಲಿಕೆಯ ಕಂಟ್ರೋಲ್ ರೂಮ್ 0821-2440890, ಮೊ.ಸಂ. 9449841196 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡಲ್ಲಿ ನಮ್ಮ ಮೊಬೈಲ್ ತಂಡ ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.