ಕರ್ನಾಟಕ

karnataka

ETV Bharat / state

ಏಪ್ರಿಲ್ 8 ಮತ್ತು 9 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಏಪ್ರಿಲ್ 9 ರಂದು ಮೈಸೂರಿನಲ್ಲಿ ನಡೆಯುತ್ತಿರುವ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಏಪ್ರಿಲ್ 8ರ ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ.

modi
ಮೋದಿ

By

Published : Apr 5, 2023, 9:18 AM IST

ಮೈಸೂರು: ಪ್ರಧಾನಿ ನರೆಂದ್ರ ಮೋದಿ ಅವರು ಏಪ್ರಿಲ್ 8 ಮತ್ತು 9 ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 8 ರಂದು ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಇಲ್ಲಿನ ರ‍್ಯಾಡಿಷನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳಸಲಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ 9.30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಬಳಿಕ ಬಂಡೀಪುರದಿಂದ ತಮಿಳುನಾಡಿನ ನೀಲಗಿರಿಗೆ ಹೋಗಲಿದ್ದಾರೆ. ಅಲ್ಲಿನ ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ ನೀಲಗಿರಿಯಿಂದ ಮೈಸೂರಿನ ಕೆಎಸ್ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಬೆಳಗ್ಗೆ 11ಕ್ಕೆ ಆಗಮಿಸುವರು. ಬಳಿಕ, ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯುವ ಬಂಡೀಪುರ ಹುಲಿ ಯೋಜನೆ 50 ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆನಂತರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್​ ಆಗಲಿದ್ದಾರೆ.

ಇದನ್ನೂ ಓದಿ :ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯನ್ನು ಕಣ್ತುಂಬಿಕೊಂಡ ಜರ್ಮನಿ ಅಭಿಮಾನಿ..

ಮೋದಿ ಆಗಮನದ ಹಿನ್ನೆಲೆ ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸುತ್ತಿದ್ದು, ಬಂಡೀಪುರಕ್ಕೆ ಹೋಗುವ ರಸ್ತೆ ಮಧ್ಯೆ ಸಿಗುವ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗುತ್ತಿದೆ. ರಸ್ತೆ ದುರಸ್ತಿಯೂ ನಡೆಯುತ್ತಿದೆ. ಜೊತೆಗೆ, ಏಪ್ರಿಲ್ 4 ರಿಂದ 9 ರ ವರೆಗೆ ಬಂಡೀಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹ, ಕಾಟೇಜ್‌‌ಗಳ ಬುಕ್ಕಿಂಗ್​​ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

ಇನ್ನು ಮೋದಿ ಭೇಟಿ ವೇಳೆ ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದ ರೀತಿ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಬಂಡೀಪುರಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ :ಮೋದಿ ಬಂಡೀಪುರ ಭೇಟಿಗೆ ದಿನಗಣನೆ-ಭದ್ರತೆ ಕೈಗೊಳ್ಳಲು ಎಡಿಜಿಪಿ ಅಲೋಕ್ ಕುಮಾರ್​ ಎಂಟ್ರಿ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವಯನಾಡು ಅರಣ್ಯ ಪ್ರದೇಶದ ಗಡಿ ಹೊಂದಿದೆ. 1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ್ದು, ಯೋಜನೆಯಲ್ಲಿ ಬಂಡೀಪುರವೂ ಸೇರಿದೆ. ಇದರ ಜೊತೆಗೆ, ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿದೆ. 1973ರಲ್ಲಿ ಹುಲಿ ಯೋಜನೆ ಘೋಷಿಸಿದಾಗ ಕೇವಲ 10-15 ಹುಲಿಗಳಿದ್ದವು. ಈಗ ಅವುಗಳ ಸಂಖ್ಯೆ 150 ದಾಟಿದೆ . ಜೊತೆಗೆ, ದೇಶದ ಪ್ರಧಾನಿಯೊಬ್ಬರು ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಸಫಾರಿ ನಡೆಸಿದರೆ ಸ್ಮರಣೀಯ ಕ್ಷಣವಾಗಿ ದಾಖಲಾಗಲಿದೆ.

ಇದನ್ನೂ ಓದಿ :ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಅರಣ್ಯ ಇಲಾಖೆಯಿಂದ ಸಕಲ ತಯಾರಿ

ABOUT THE AUTHOR

...view details