ಮೈಸೂರು: ಯಾದವಗಿರಿಯಲ್ಲಿರುವ ರೈಲ್ವೆ ಕ್ವಾರ್ಟರ್ಸ್ನಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, ಮಕ್ಕಳು ಸೇರಿದಂತೆ 40 ಮಂದಿ ಅಸ್ವಸ್ಥಗೊಂಡು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕ್ಲೋರಿನ್ ಸೋರಿಕೆ ಆಗಿದ್ದು, ರೈಲ್ವೆ ವಸತಿ ಗೃಹದಲ್ಲಿರುವ ಜನರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಈ ಸಂದರ್ಭದಲ್ಲಿ 5 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಆರ್‌ಎಸ್ ರಸ್ತೆಯನ್ನು ಬಂದ್ ಮಾಡಲಾಗಿದ್ದು, ರೈಲ್ವೆ ವಸತಿ ಗೃಹಕ್ಕೆ ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಆಗಮಿಸಿ, ಕ್ಲೋರಿನೇಷನ್ ಮೇಲೆ ನೀರು ಹಾಕಿ ಲೀಕೇಜ್ ಮುಚ್ಚುವ ಕೆಲಸ ಮಾಡುತ್ತಿದ್ದಾರೆ.