ಕರ್ನಾಟಕ

karnataka

ETV Bharat / state

'ರೈತರ ದಾರಿ ತಪ್ಪಿಸಿದ ಮುಖಂಡ ಈಗ KSRTC ನೌಕರರ ದಾರಿ ತಪ್ಪಿಸುತ್ತಿದ್ದಾರೆ' - Mysore

ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಕೆಎಸ್ಆ​ರ್​ಟಿಸಿ ನೌಕರರ ದಾರಿ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ಕೆಎಸ್ಆ​ರ್​ಟಿಸಿ ನೌಕರರು ತಮ್ಮ ನಾಯಕ ಎಂದು ಮಾಡಿಕೊಂಡಿದ್ದು ತಪ್ಪು ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

MP pratap simha
ಸಂಸದ ಪ್ರತಾಪಸಿಂಹ

By

Published : Apr 8, 2021, 11:59 AM IST

ಮೈಸೂರು: ರೈತರ ದಾರಿ ತಪ್ಪಿಸಿದವರನ್ನು ಕೆಎಸ್ಆ​ರ್​ಟಿಸಿ ನೌಕರರು ತಮ್ಮ ನಾಯಕನಾಗಿ ಮಾಡಿಕೊಂಡಾಗ ಇವರು ದಾರಿ ತಪ್ಪದೆ ಇರುತ್ತಾರಾ? ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಸಾರಿಗೆ ನೌಕರರ ಮುಷ್ಕರಕ್ಕೆ ಸಿಡಿಮಿಡಿಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಕೆಎಸ್ಆ​ರ್​ಟಿಸಿ ನೌಕರರ ದಾರಿ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ಕೆಎಸ್ಆ​ರ್​ಟಿಸಿ ನೌಕರರು ತಮ್ಮ ನಾಯಕ ಎಂದು ಮಾಡಿಕೊಂಡಿದ್ದು ತಪ್ಪು ಎಂದು ಕಿಡಿಕಾರಿದರು.

ಪ್ರೊ.‌ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರು ಇದ್ದಾಗ ರೈತ ಮುಖಂಡರ ಹೋರಾಟದ ಬಗ್ಗೆ ಗೌರವವಿತ್ತು. ಅವರಿಬ್ಬರು ಅಸ್ತಂಗತವಾದ ನಂತರ ಈಗ ಅಂತಹ ಮುಖ ಆ ಹೋರಾಟದಲ್ಲಿ ಇಲ್ಲ. ಈಗ ಇರುವವರು ಖಾಲಿ ಹೋರಾಟಗಾರರು. ಹಾಗಾಗಿ ಇಂತಹ ಹೋರಾಟಗಾರರನ್ನ ನಂಬಿದರೆ ನೌಕರರು ಸಹ ದಾರಿತಪ್ಪುತ್ತಾರೆ ಎಂದು ಹರಿಹಾಯ್ದರು.

ನಾವು ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಕೆಎಸ್ಆ​ರ್​ಟಿಸಿ ನೌಕರರು ರಾಜ್ಯ ಸರ್ಕಾರ ಸಂಕಷ್ಟದಲ್ಲಿ ಇರುವಾಗ ಈ ರೀತಿ ಹೋರಾಟಕ್ಕೆ ಇಳಿಯುವುದು ತಪ್ಪು. ಇದು ಮುಂದುವರಿದರೆ ಜನರೇ ಈ ವಿಭಾಗದಲ್ಲೂ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನ ಈ ಬಗ್ಗೆ ಧ್ವನಿ ಎತ್ತುವಂತೆ ಮಾಡಬೇಡಿ ಎಂದು ಎಚ್ಚರಿಸಿದರು.

ಜಾಸ್ತಿ ಕೆಲಸ ಮಾಡುವ ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ. ಆ ಪ್ರೀತಿ ಕಳೆದು ಕೊಳ್ಳಬೇಡಿ. ಎಸ್ಮಾ ಜಾರಿ ಮಾಡಿ ಬಲವಂತವಾಗಿ ಕೆಲಸಕ್ಕೆ ಹಾಜರಾಗುವಂತಹ ಪರಿಸ್ಥಿತಿ ತಂದು ಕೊಳ್ಳಬೇಡಿ. ಎಸ್ಮಾ ಜಾರಿಯ ಅನಿರ್ವಾಯತೆಯನ್ನು ಸರ್ಕಾರಕ್ಕೆ ತಂದಿಡಬೇಡಿ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಈಗ ಬೇಡಿಕೆ ಈಡೇರಿಸಿ ಎನ್ನುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲೇ ಅವರು ಈ ಕೆಲಸ ಮಾಡಬಹುದಿತ್ತಲ್ವಾ? ಸಿದ್ದರಾಮಯ್ಯ ಅವರ ಇವತ್ತಿನ ಮಾತನ್ನು ಜನರು ಮೆಚ್ಚಲ್ಲ. ಅವರ ಆತ್ಮಸಾಕ್ಷಿಯೂ ಮೆಚ್ಚಲ್ಲ ಎಂದು ಕಿಡಿಕಾರಿದರು.

ABOUT THE AUTHOR

...view details