ಮೈಸೂರು:ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಎಚ್ಚೆತ್ತು, 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಹಾಲಿ ಸಂಸದ ಪ್ರತಾಪ್ ಸಿಂಹ ಅವರು, ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸುವ ಕೆಲಸ ಆರಂಭಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಒಂದು ನೋಟ ಇಲ್ಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ, ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮೆಲುಗೈ ಸಾಧಿಸಿದ್ದು. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಮೈಸೂರು ಮತ್ತು ಮಡಿಕೇರಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಈಗಾಗಲೇ ಕೆಲಸ ಆರಂಭಿಸಿರುವ ಪ್ರತಾಪ್ ಸಿಂಹ, ಪ್ರತಿದಿನ ತಮ್ಮ ಕ್ಷೇತ್ರದಲ್ಲೇ ಅಧಿಕಾರಿಗಳ ಸಭೆ, ಸ್ಥಳ ಪರಿಶೀಲನೆ ಸೇರಿದಂತೆ ಹಲವಾರು ಕೆಲಸಗಳಲ್ಲಿ ಸಂಸದರು ನಿರತರಾಗಿದ್ದಾರೆ.
ವಿಧಾನಸಭೆಯ ಫಲಿತಾಂಶ ಲೋಕಸಭಾ ಚುನಾವಣೆಯ ದಿಕ್ಸೂಚಿಯೇ ?:ಈ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಕೊಡಗು ಕ್ಷೇತ್ರದ ಲೋಕಸಭಾ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಹುಣಸೂರು, ಪಿರಿಯಾಪಟ್ಟಣ, ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳು ಈ ವ್ಯಾಪ್ತಿಯಲ್ಲಿ ಬರಲಿದ್ದು. ಇದರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, ಎರಡರಲ್ಲಿ ಜೆಡಿಎಸ್ ಹಾಗೂ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಪಡೆದಿದೆ. ಈ ಕ್ಷೇತ್ರಗಳಲ್ಲಿ ಮತ್ತೆ ಮುಂದಿನ ಲೋಕಸಭೆಗೆ ಹೆಚ್ಚಿನ ಮತ ತೆಗೆದುಕೊಂಡರೆ ಮಾತ್ರ ಬಿಜೆಪಿಗೆ ಗೆಲ್ಲಲು ಸಾಧ್ಯವಿದ್ದು. ಈ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ತನ್ನ ಕೆಲಸವನ್ನು ಆರಂಭಿಸಿದೆ.
ಹಾಲಿ ಸಂಸದರು ಹೇಳುವುದೇನು:ಈ ಬಾರಿಯವಿಧಾನಸಭೆಚುನಾವಣಾ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಜನರು ಪ್ರಜ್ಞಾವಂತರು, ದೇಶದ ಭದ್ರತೆ ಹಾಗೂ ಭವಿಷ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸುತ್ತಾರೆ. ಈ ಬಾರಿ ನಾವು ಒಳ್ಳೆಯ ಸರ್ಕಾರ ಕೊಟ್ಟಿದ್ದರು, ಜನರು ಕಾಂಗ್ರೆಸ್ನ ಗ್ಯಾರಂಟಿಗಳನ್ನು ನಂಬಿ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಿದರು.