ಮೈಸೂರು :ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧ ಮಾಡಬೇಕೆಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು. ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಸಿಲ್ವರ್ ಸ್ಪಿರಿಟ್ ಟೆಕ್ ಪಾರ್ಕ್ನಲ್ಲಿ ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೈಸೂರು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಸಂಸದರು ಭಾಗವಹಿಸಿ ಮಾತನಾಡಿದರು.
ಐಎಎಸ್, ಐಪಿಎಸ್ ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮಾಡಿದ ಕೆಲಸಗಳನ್ನು ಜಿಲ್ಲೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲೂ ಮಾಹಿತಿ ಹಾಕಲಿ, ಫ್ಯಾನ್ಸ್ ಫೇಜ್ಗಳಿಂದ ಹೊಗಳಿಕೆಗಳು ಸೃಷ್ಟಿಯಾಗಿದೆ. ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದ್ರೆ ಹಾಗೆ ಹೀಗೆ ಅಂತಾ ಬಿಂಬಿಸಲಾಗುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳು ಉತ್ತಮ ಕೆಲಸಗಳನ್ನು ಮಾಡಬೇಕು ಎಂದರು.