ಮೈಸೂರು:ವರ್ಗಾವಣೆ ಪತ್ರ ಮಗ್ಗಿ ಪುಸ್ತಕವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರಿಗೆ ಎಸಿ ಅವರನ್ನು ವರ್ಗಾವಣೆ ಮಾಡಿ ಎಂದು ಪತ್ರ ಬರೆದಿಲ್ಲವೆಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
ವರ್ಗಾವಣೆ ಪತ್ರ ಮಗ್ಗಿ ಪುಸ್ತಕವಾಗಿದೆ: ಸಂಸದ ಶ್ರೀನಿವಾಸ್ ಪ್ರಸಾದ್ - srinivas prasad
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅವರದ್ದೇ ಆದ ಜವಾಬ್ದಾರಿಗಳಿವೆ. ಹಾಗಾಗಿ ಅವರ ಮೇಲೆ ನಾವು ವರ್ಗಾವಣೆ ಕುರಿತಂತೆ ಒತ್ತಡ ಹೇರಲು ಸಾಧ್ಯವಿಲ್ಲವೆಂದು ವಿ.ಶ್ರೀನಿವಾಸ್ ಪ್ರಸಾದ್ ಸ್ಪಷ್ಟಪಡಿಸಿದರು.
ಸಂಸದ ಶ್ರೀನಿವಾಸ್ ಪ್ರಸಾದ್
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನಾಗಲಿ ಅಥವಾ ನನ್ನ ಅಳಿಯ ಶಾಸಕ ಹರ್ಷವರ್ಧನ್ ಅವರಾಗಲಿ ಇಂತಹ ವ್ಯಕ್ತಿಯನ್ನೇ ಮೈಸೂರಿಗೆ ವರ್ಗಾವಣೆ ಮಾಡಿ ಅಂತ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿಲ್ಲ ಎಂದು ಸ್ಪಷ್ಟನೆ ನೀಡಿದರು.
14 ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಬೀಳಲು ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರೇ ಕಾರಣರಾಗಿದ್ದಾರೆ. ಸಮನ್ವಯ ಇಲ್ಲದ ಕಾರಣ ಈ ರೀತಿ ಆಗಿದೆ. ಸಿದ್ದರಾಮಯ್ಯ ಈಗ ಮಾತನಾಡುತ್ತಿದ್ದಾರೆ ಎಂದು ಕುಟುಕಿದರು.