ಕರ್ನಾಟಕ

karnataka

ETV Bharat / state

24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದು ತುಂಬಾ ದುಃಖಕರ ವಿಷಯ : ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಷಾದ - ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಷಾದ

ಪ್ರಾಥಮಿಕವಾಗಿ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮೈಸೂರು ಅಧಿಕಾರಿಗಳ ಜೊತೆ ಆಕ್ಸಿಜನ್ ಪೂರೈಕೆಯ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಮಾತನಾಡಿದ್ದಾರೆ..

ವಿ. ಶ್ರೀನಿವಾಸ ಪ್ರಸಾದ್ ವಿಷಾದ
ವಿ. ಶ್ರೀನಿವಾಸ ಪ್ರಸಾದ್ ವಿಷಾದ

By

Published : May 3, 2021, 12:57 PM IST

ಮೈಸೂರು : ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿದೆ. ಇದು ತುಂಬಾ ದುಃಖಕರ ಘಟನೆ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ‌.

24 ಜನರ ಸಾವಿಗೆ ಸಂಬಂಧಿಸಿದಂತೆ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಷಾದ..

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ‌ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆ ದುರದೃಷ್ಟಕರ. ಈ ಘಟ‌ನೆಗೆ ಕಾರಣ ಏನು ಎಂಬುದರ ಬಗ್ಗೆ ಕುಲಂಕಶವಾಗಿ ತಿಳಿಯಲು ಆರೋಗ್ಯ ಸಚಿವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದು, ಅವರು ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲಿದ್ದಾರೆ.

ಪ್ರಾಥಮಿಕವಾಗಿ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮೈಸೂರು ಅಧಿಕಾರಿಗಳ ಜೊತೆ ಆಕ್ಸಿಜನ್ ಪೂರೈಕೆಯ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಮಾತನಾಡಿದ್ದಾರೆ.

ಈ ಘಟನೆಯಿಂದ ಸಾವನ್ನಪ್ಪಿರುವ ಬಡ ಕುಟುಂಬಗಳಿಗೆ ಹೆಚ್ಚಿನ ಪರಿಹಾರವನ್ನು ನೀಡಬೇಕೆಂದು ಮುಖ್ಯಮಂತ್ರಿ ಅವರಿಗೆ ಮಾನವಿ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ತಿಳಿಸಿದರು‌.

ಇದನ್ನೂ ಓದಿ : ಚಾಮರಾಜನಗರದಲ್ಲಿ 24 ಕೋವಿಡ್​ ಸೋಂಕಿತರ ಸಾವು; ಅಷ್ಟಕ್ಕೂ ಆಸ್ಪತ್ರೆಯಲ್ಲಿ ಆಗಿದ್ದೇನು?

ABOUT THE AUTHOR

...view details