ಮೈಸೂರು :ನಗರದ ಬನ್ನಿಮಂಟಪ 'ಬಿ' ಬಡಾವಣೆಯ ನಿವೇಶನ ಸಂಖ್ಯೆ 386 ಮತ್ತು 400/ಬಿ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತೆರವುಗೊಳಿಸಿ ವಶಪಡಿಸಿಕೊಂಡಿದೆ.
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಿದ ಕಟ್ಟಡ ತೆರವುಗೊಳಿಸಿದ ಮುಡಾ - ಅನಧಿಕೃತ ಕಟ್ಟಡ ತೆರವುಗೊಳಿಸಿದ ಮುಡಾ,
ಸುಳ್ಳು ದಾಖಲೆ ಸೃಷ್ಠಿಸಿ ಸರ್ಕಾರದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದನ್ನು ಮುಡಾ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಅನಧಿಕೃತ ಕಟ್ಟಡ ತೆರವುಗೊಳಿಸಿದ ಮುಡಾ
2 ಕೋಟಿ ರೂ. ಬೆಲೆಬಾಳುವ ನಿವೇಶನಗಳಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಅನಧಿಕೃತವಾಗಿ ಲಾರಿ ಟ್ರಾನ್ಸ್‌ಪೋರ್ಟ್ ಕಚೇರಿಯನ್ನು ನಿರ್ಮಿಸಿ ತಂತಿಬೇಲಿ ಅಳವಡಿಸಿಕೊಂಡಿದ್ದರು. ಸೋಮವಾರ ಪ್ರಾಧಿಕಾರದ ಆಯುಕ್ತರ ನಿರ್ದೇಶನದಂತೆ ಅನಧಿಕೃತವಾಗಿ ನಿರ್ಮಿಸಲಾದ ಕಟ್ಟಡವನ್ನು ತೆರವುಗೊಳಿಸಿ ವಶಪಡಿಸಿಕೊಂಡು ನಾಮಫಲಕ ಅಳವಡಿಸಲಾಗಿದೆ.
ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ವಲಯ ಅಧಿಕಾರಿ ನರೇಂದ್ರಬಾಬು, ಸಹಾಯಕ ಅಭಿಯಂತರ ಮಣಿ ಹಾಗೂ ಸಿಬ್ಬಂದಿ ಹಾಜರಿದ್ದರು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಡಿ ಬಿ ನಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.