ಮೈಸೂರು:ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮುನಿರತ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು.
ಉಪ ಚುನಾವಣೆ ಘೋಷಣೆ: ಚಾಮುಂಡಿ ತಾಯಿ ದರ್ಶನ ಪಡೆದ ಮುನಿರತ್ನ - ಚಾಮುಂಡಿ ಬೆಟ್ಟ
ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆ ರಾಜರಾಜೇಶ್ವರಿ ನಗರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದಿದ್ದಾರೆ.

ಇಂದು ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಚಾಮುಂಡಿ ಬೆಟ್ಟಕ್ಕೆ ಸಂಸದ ಪ್ರತಾಪ್ ಸಿಂಹ ಜೊತೆ ಆಗಮಿಸಿ ಚಾಮುಂಡಿ ತಾಯಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುನಿರತ್ನ, ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಗೆದ್ದು ಜನರ ಋಣ ತೀರಿಸುತ್ತೇನೆ, ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ , ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ್ರು. ನಾಳೆ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ ಎಂದು ಇದೆ ಸಂದರ್ಭದಲ್ಲಿ ಮುನಿರತ್ನ ತಿಳಿಸಿದರು.
TAGGED:
chamundi hills