ಮೈಸೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮುನಿರತ್ನ ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಖಾಸಗಿ ವಾಹಿನಿಯ ಸಂಪಾದಕರ ಜೊತೆ ಆಗಮಿಸಿದ ನೂತನ ಬಿಜೆಪಿ ಶಾಸಕ ಮುನಿರತ್ನ, ಚಾಮುಂಡೇಶ್ವರಿಯ ದರ್ಶನ ಪಡೆದು ಗೆಲುವಿನ ಹರಕೆ ತೀರಿಸಿದ್ದಾರೆ.
ಚಾಮುಂಡೇಶ್ವರಿ ದೇವಿಗೆ ಗೆಲುವಿನ ಹರಕೆ ತೀರಿಸಿದ ಶಾಸಕ ಮುನಿರತ್ನ - MLA Muniratna Visits Mysore Chamundeshwari Temple
ಚಾಮುಂಡಿ ಬೆಟ್ಟಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಖಾಸಗಿ ವಾಹಿನಿಯ ಸಂಪಾದಕರ ಜೊತೆ ಆಗಮಿಸಿದ ನೂತನ ಬಿಜೆಪಿ ಶಾಸಕ ಮುನಿರತ್ನ ಚಾಮುಂಡೇಶ್ವರಿಯ ದರ್ಶನ ಪಡೆದು ಗೆಲುವಿನ ಹರಕೆ ತೀರಿಸಿದ್ದಾರೆ.
ಚಾಮುಂಡೇಶ್ವರಿ ದೇವಿಗೆ ಗೆಲುವಿನ ಹರಕೆ ತೀರಿಸಿದ ಶಾಸಕ ಮುನಿರತ್ನ
ಉಪ ಚುನಾವಣೆ ಸಂದರ್ಭದಲ್ಲಿ ಆಗಮಿಸಿದ್ದ ಮುನಿರತ್ನ, ಚಾಮುಂಡೇಶ್ವರಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಗೆಲುವಿನ ನಂತರ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಫೋಟೋವನ್ನು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.