ಮೈಸೂರು:ಮಹಿಳೆಯೊಂದಿಗೆ ಯುವಕನ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಕುಟುಂಬವನ್ನೇ ಕೊಲೆ ಮಾಡಲು ಯತ್ನಿಸಿರುವ ಘಟನೆ ಹೆಚ್. ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಹೆಚ್. ಡಿ ಕೋಟೆ ತಾಲೂಕು ಜೊಂಪನಹಳ್ಳಿ ಗ್ರಾಮದ ಶಿವಪ್ಪ (45), ಜ್ಯೋತಿ (40) ಹಾಗೂ ಶರತ್ (20) ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಹಿತ್ ಹಾಗೂ ಪರಶಿವಮೂರ್ತಿ ಎಂಬುವರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಘಟನೆ ಹಿನ್ನೆಲೆ: ಜೊಂಪನಹಳ್ಳಿಯ ವಿವಾಹಿತ ಮಹಿಳೆಯ ಜೊತೆ ಶರತ್ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನಲಾಗ್ತಿದೆ. ಈ ವಿಚಾರದಲ್ಲಿ ಮಹಿಳೆ ಕಡೆಯವರಾದ ಲೋಹಿತ್ ಹಾಗೂ ಪರಶಿವಮೂರ್ತಿ ಕಡೆಯಿಂದ ಒಂದೆರಡು ಬಾರಿ ಗಲಾಟೆ ನಡೆದಿತ್ತು. ಪಂಚಾಯಿತಿ ನಡೆಸಿ ಮಹಿಳೆ ಹಾಗೂ ಶರತ್ ಕುಟುಂಬಕ್ಕೆ ಎಚ್ಚರಿಕೆ ನೀಡಲಾಗಿತ್ತು.
ಆದರೂ ಇಬ್ಬರ ನಡುವೆ ಅಕ್ರಮ ಸಂಬಂಧ ಮುಂದುವರೆದಿತ್ತು. ಮಹಿಳೆ ಸಹವಾಸಕ್ಕೆ ಬರದಂತೆ ಶರತ್ಗೆ ಮಹಿಳೆಯ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಭಾನುವಾರ ನ್ಯಾಯಪಂಚಾಯ್ತಿ ಸಹ ನಡೆಸಲಾಗಿತ್ತು. ಆದರೆ, ಕಾರಣಾಂತರದಿಂದ ನ್ಯಾಯಪಂಚಾಯ್ತಿ ಮುಂದೂಡಲಾಗಿತ್ತು. ಪರಿಚಯಸ್ಥರೊಬ್ಬರು ಸಾವನ್ನಪ್ಪಿದ ಕಾರಣ ಅಂತಿಮ ದರ್ಶನಕ್ಕೆ ಶರತ್, ತಂದೆ ಶಿವಪ್ಪ ಹಾಗೂ ತಾಯಿ ಜ್ಯೋತಿ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು.