ಕರ್ನಾಟಕ

karnataka

ETV Bharat / state

ಮೈಸೂರು: ಪ್ರಿಯತಮೆಗೆ ಬೆಂಕಿ ಹಚ್ಚಿ ಕೊಂದಿದ್ದ ಆರೋಪಿ ಅಂದರ್​ - ಮೈಸೂರು ಸುದ್ದಿ

ಇಲ್ಲಿನ ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆವೋರ್ವಳ ಶವ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Murder of a woman set on fire: another accused Arrested
ಮತ್ತೋರ್ವ ಆರೋಪಿಯ ಬಂಧನ

By

Published : Nov 17, 2020, 10:05 AM IST

ಮೈಸೂರು:ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಚಾಮಲಪುರಹುಂಡಿಯ ಪ್ರಸನ್ನ ಕುಮಾರ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಆರೋಪಿ ಸಿದ್ದರಾಜು ಹಾಗೂ ಮತ್ತವನ ಸ್ನೇಹಿತನೊಂದಿಗೆ ಸೇರಿ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಭಾಗ್ಯ (18) ಎಂಬಾಕೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿ ಸಿದ್ದರಾಜು ಹಾಗೂ ಭಾಗ್ಯ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿನ್ನೆಲೆ ಭಾಗ್ಯ ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಇದಕ್ಕೆ ಒಪ್ಪದ ಸಿದ್ದರಾಜು ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಮೈಸೂರು: ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ನವೆಂಬರ್ 8ರಂದು ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ರಸ್ತೆ ಬದಿಯಲ್ಲಿ ಯುವತಿಯ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details