ಮೈಸೂರು:ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಮೈಸೂರು ಕೋರ್ಟ್
2014 ರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2014 ರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮೋದ್ ಕುಮಾರ್ (35) ಎಂಬ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಮೂಲತಃ ಕೊಳ್ಳೆಗಾಲದ ಈತ 2014 ರಲ್ಲಿ ಕೃತಿಕಾ ದೇವಿ ಎಂಬುವರನ್ನು ಮೈಸೂರು ನಗರದ ಹೊರವಲಯ ಆರ್.ಟಿ.ನಗರದ ಬಳಿ ಭೀಕರವಾಗಿ ಕೊಲೆ ಮಾಡಿದ್ದನು. ಈ ಸಂಬಂಧ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆದು ತೀರ್ಪು ಹೊರಬಿದ್ದಿದ್ದು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಜಯಶ್ರೀ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.