ಕರ್ನಾಟಕ

karnataka

ETV Bharat / state

ಮೈಸೂರು: ಅರಮನೆ ಅಂಗಳದಲ್ಲಿ ಮಾವುತ, ಕಾವಾಡಿಗಳಿಗೆ ಉಪಹಾರ ಕೂಟ - Mysore dasara

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಅರಮನೆ ಆವರಣದಲ್ಲಿ ಇಂದು ಬೆಳಗ್ಗೆ ಮಾವುತರು ಮತ್ತು ಕಾವಾಡಿಗರಿಗೆ ಏರ್ಪಡಿಸಲಾದ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು.

Breakfast party  for mavutha and  kavadis
ಮಾವುತರಿಗೆ ಉಪಹಾರ ಬಡಿಸಿದ ಸಚಿವ ಎಸ್.ಟಿ.ಸೋಮಶೇಖರ್

By

Published : Sep 18, 2022, 12:32 PM IST

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾವುತರಿಗೆ ಉಪಹಾರ ಬಡಿಸಿದರು.

ಸಚಿವ ಎಸ್.ಟಿ.ಸೋಮಶೇಖರ್

ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಜ್ಜಾಗಿದೆ. ದಸರಾಗೆ ಎಲ್ಲಾ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ನಾಳೆ ಸಂಜೆ ಅಂತಿಮವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:ರಾಷ್ಟ್ರಪತಿಯಿಂದ ಮೈಸೂರು ದಸರಾ ಉದ್ಘಾಟನೆ.. ಅಪ್ಪುಗೆ ಯುವ ದಸರಾ ಮೀಸಲು

ABOUT THE AUTHOR

...view details