ಕರ್ನಾಟಕ

karnataka

ETV Bharat / state

ಮೈಸೂರು ದಸರಾ ಯಶಸ್ವಿ, ಅಧಿಕಾರಿಗಳ ಕಾರ್ಯನಿರ್ವಹಣೆಗೆ ಸಚಿವ ಮಹದೇವಪ್ಪ ಮೆಚ್ಚುಗೆ - ನಾಲ್ವಡಿಯವರ ಕೊಡುಗೆ

ದಸರಾ ದೀಪಾಲಂಕಾರ ನವೆಂಬರ್ 5ರ ವರಗೆ ಇರಲಿದೆ. ಈ ದೀಪಾಲಂಕಾರದಲ್ಲಿ ಸಾಮಾಜಿಕ ಸಂದೇಶಗಳು, ಪ್ರಜಾಪ್ರಭುತ್ವ, ಸಂವಿಧಾನ, ನಾಲ್ವಡಿಯವರ ಕೊಡುಗೆಗಳು ರಾರಾಜಿಸಿವೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.

Minister HC Mahadevappa spoke at the function held at Mysore
ಮೈಸೂರಲ್ಲಿ ನಡೆದ ಕಾಯಕ್ರಮದಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಮಾತನಾಡಿದರು.

By ETV Bharat Karnataka Team

Published : Oct 29, 2023, 9:37 PM IST

Updated : Oct 29, 2023, 10:52 PM IST

ಸಚಿವ ಹೆಚ್ ಸಿ ಮಹದೇವಪ್ಪ ಮಾತನಾಡಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಯಶಸ್ವಿಗೊಳಿಸಿದ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಮಾಧ್ಯಮದವರನ್ನು ಅಭಿನಂದಿಸುವುದಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು.

ಸರ್ಕಾರಿ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಉಪಹಾರ ಕೂಟದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ವೈಭವದ ದಸರಾ ಆಚರಿಸುತ್ತೇವೆಂದು ಹೇಳಿದ್ದೆನು. ಆದರೂ ಮಳೆ ಬಹಳಷ್ಟು ಪ್ರಮಾಣದಲ್ಲಿ ಕೊರತೆ ಆಗಿದ್ದರಿಂದ ಅದ್ಧೂರಿಯೂ ಅಲ್ಲದ ಸರಳವೂ ಅಲ್ಲದ ಸಾಂಪ್ರದಾಯಿಕ ದಸರಾ ಆಯೋಜಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.

ಈ ಬಾರಿಯ ದಸರಾದಲ್ಲಿ ಕಾರ್ಯನಿರ್ವಹಿಸಿದ ಬಹುತೇಕ ಅಧಿಕಾರಿಗಳು ಹೊಸಬರಾದರೂ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸಿದರು. ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಸೇರಿದರೂ ಯಾವುದೇ ಕೊರತೆಯಾಗದಂತೆ ಹಾಗೂ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಸರಾ ದೀಪಾಲಂಕಾರ ನ.5 ರ ವರೆಗೆ ಇರಲಿದೆ. ಈ ಬಾರಿಯ ದೀಪಾಲಂಕಾರದಲ್ಲಿ ಸಾಮಾಜಿಕ ಸಂದೇಶಗಳು, ಪ್ರಜಾಪ್ರಭುತ್ವ, ಸಂವಿಧಾನ, ನಾಲ್ವಡಿ ಕೃಷ್ಣರಾಜ ಒಡೆಯರ್​ ಕೊಡುಗೆಗಳು ರಾರಾಜಿಸಿವೆ. ಸಂಬಂಧಿಸಿದ ದಸರಾ ಖರ್ಚು ವೆಚ್ಚಗಳನ್ನು ಜಿಲ್ಲಾಧಿಕಾರಿಗಳು ಶೀಘ್ರವೇ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಒಟ್ಟಾರೆ ದಸರಾ ಯಶಸ್ಸಿಗೆ ಸಹಕಾರ ನೀಡಿದ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು, ಸಚಿವರುಗಳು, ಜನಪ್ರತಿನಿಧಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಅಭಿನಂದಿಸಿದರು.

ಇದನ್ನೂ ಓದಿ:ವಿಜೃಂಭಣೆಯಿಂದ ನೆರವೇರಿದ ಮೈಸೂರು ದಸರಾ: ಜಗತ್ಪ್ರಸಿದ್ಧ ಜಂಬೂ ಸವಾರಿಗೆ ಸಾಕ್ಷಿಯಾದ ಜನಸಾಗರ

Last Updated : Oct 29, 2023, 10:52 PM IST

ABOUT THE AUTHOR

...view details