ಮೈಸೂರು:ಜಿಲ್ಲೆಯಲ್ಲಿ ವಾಡಿಕೆಯಂತೆ ಮಳೆಯಾಗುತ್ತಿದೆ. ಜೂನ್ನಿಂದ ಇಲ್ಲಿಯವರೆಗೆ 3,200 ಮನೆಗಳಿಗೆ ಹಾನಿಯಾಗಿದೆ. ಅದರಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ 700 ಮನೆಗಳು ತೊಂದರೆಗೊಳಗಾಗಿವೆ. ಆದರೆ, ಪ್ರವಾಹದ ಭೀತಿಯಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಪಿರಿಯಾಪಟ್ಟಣ, ಹುಣಸೂರು, ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕುಗಳಲ್ಲಿ ಅತೀ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಈವರೆಗೆ 21 ಕೋಟಿ ರೂ ಅನುದಾನ ನೀಡಲಾಗಿದೆ. ಮೈಸೂರು ನಗರದಲ್ಲಿ ದಟ್ಟಗಳ್ಳಿ ಕಡೆಯಿಂದ ಲಿಂಗಾಂಬುದಿ ಕೆರೆಗೆ ಹೆಚ್ಚು ನೀರು ಹರಿಯುತ್ತಿದ್ದು, ನೀರು ಹೊರ ಹೋಗಲು ಕ್ರಮ ಕೈಗೊಳ್ಳಲಾಗಿದೆ.