ಮೈಸೂರು:ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡುವಂತೆ ಒತ್ತಾಯಿಸಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ಕೊಡಿ: ವಿದ್ಯಾರ್ಥಿನಿಯರಿಂದ ಪ್ರತಿಭಟನೆ - ಮೈಸೂರು ವಿದದ್ಯಾರ್ಥಿಗಲ ಪ್ರತಿಭಟನೆ
ಲ್ಯಾಪ್ಟಾಪ್ ನೀಡುವಂತೆ ಒತ್ತಾಯಿಸಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ಸರ್ಕಾರವು ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದ್ದು, ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡಬೇಕೆಂದು ಒತ್ತಾಯಿಸಿದರು. ಎರಡನೇ ಮತ್ತು ಮೂರನೇ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡುವಂತೆ ಮಹಾರಾಣಿ ಮಹಿಳಾ ಕಲಾ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ, ಕಳೆದ ವರ್ಷ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವುದಾಗಿ ಭರವಸೆ ನೀಡಿದ್ದರು. ಆದ್ರೆ ಭರವಸೆ ಈಡೇರಿಸದ ಹಿನ್ನಲೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೂ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು.