ಕೊರೊನಾ ನಿಯಂತ್ರಿಸಲು ಮೈಸೂರು ಜಿಲ್ಲಾಡಳಿತದ ಯಶಸ್ವಿ ಕ್ರಮ: ಮೆಚ್ಚುಗೆ - ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿ ಕ್ರಮ
ಮೈಸೂರಿನಲ್ಲಿ ಈವರೆಗೆ ಒಟ್ಟು 259 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಆ ಪೈಕಿ 162 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 95 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.
![ಕೊರೊನಾ ನಿಯಂತ್ರಿಸಲು ಮೈಸೂರು ಜಿಲ್ಲಾಡಳಿತದ ಯಶಸ್ವಿ ಕ್ರಮ: ಮೆಚ್ಚುಗೆ Mysore](https://etvbharatimages.akamaized.net/etvbharat/prod-images/768-512-7827117-658-7827117-1593488067139.jpg)
ಕೊರೊನಾ ನಿಯಂತ್ರಿಸುವಲ್ಲಿ ಮೈಸೂರು ಜಿಲ್ಲಾಡಳಿತದಿಂದ ಯಶಸ್ವಿ ಕ್ರಮ
ಮೈಸೂರು:ಜಿಲ್ಲೆಯಲ್ಲಿ 2ನೇ ಹಂತದ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಕೊರೊನಾ ಸೋಂಕು ಹತೋಟಿಗೆ ತರಲು ಯಶಸ್ವಿಯಾಗಿದೆ.
ಕೊರೊನಾ ನಿಯಂತ್ರಿಸುವಲ್ಲಿ ಮೈಸೂರು ಜಿಲ್ಲಾಡಳಿತದಿಂದ ಯಶಸ್ವಿ ಕ್ರಮ
ಜಿಲ್ಲೆಯಲ್ಲಿ ಒಟ್ಟು 259 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಆ ಪೈಕಿ 162 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 95ಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ ಇಬ್ಬರು ಸೋಂಕಿನಿಂದ ಮರಣ ಹೊಂದಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 20,001 ಜನರ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸುಸಜ್ಜಿತವಾದ ಆಸ್ಪತ್ರೆಯನ್ನು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದ್ದು, ನಿತ್ಯ 700ಕ್ಕೂ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.