ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇನೋಗ್ರಾಫರ್, ಟೈಪಿಸ್ಟ್ ಮತ್ತು ಜವಾನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 45 ಜವಾನ ಹುದ್ದೆ, 3 ಟೈಪಿಸ್ಟ್ ಹುದ್ದೆ ಮತ್ತು 11 ಸ್ಟೇನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಏನು?: ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಪಿಯುಸಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ ಪದವಿ ಆಗಿರಬೇಕು.
ವಯೋಮಿತಿ: ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರ್ಣಗೊಳಿಸಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜವಾನ ಹುದ್ದಗೆ ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮತ್ತು ವಿಕಲಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ, ಪ್ರವರ್ಗ 2 ಎ, 2 ಬಿ, 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಟೈಪಿಸ್ಟ್ ಹುದ್ದೆಗೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿ 150ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸ್ಟೆನೋಗ್ರಾಫರ್ ಹುದ್ದಗೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿ 150ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ ಎಷ್ಟು?: ಜವಾನ ಹುದ್ದೆಗೆ 17000-28950 ರೂ, ಟೈಪಿಸ್ಟ್ ಹುದ್ದೆಗೆ 21400-42000, ಸ್ಟೆನೋಗ್ರಾಫರ್ ಗ್ರೇಡ್ 3- 27650-52650 ರೂ ನಿಗದಿಸಲಾಗಿದೆ.
ಅರ್ಜಿಯನ್ನು ಜೂನ್ 5 ರಿಂದ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 4 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು districts.ecourts.gov.in/mysuru-onlinerecruitment ಜಾಲತಾಣಕ್ಕೆ ಭೇಟಿ ನೀಡಿ.
ಇದನ್ನೂ ಓದಿ:ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ: ಶಿಕ್ಷಕರ ಹುದ್ದೆಗೆ ಸಂದರ್ಶನ