ಮೈಸೂರು:ಮೈಸೂರು ಜಿಲ್ಲಾ ಪೊಲೀಸ್ ವೆಬ್‌ಸೈಟ್ ಹ್ಯಾಕ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಮಂಗಳವಾರ ರಾತ್ರಿ ಅದನ್ನು ಸರಿಪಡಿಸಿದ್ದಾರೆ.
ಮೈಸೂರು ಜಿಲ್ಲಾ ಪೊಲೀಸ್ ವೆಬ್‌ಸೈಟ್ ಹ್ಯಾಕ್ - undefined
ಮೈಸೂರು ಜಿಲ್ಲಾ ಪೊಲೀಸ್ ವೆಬ್‌ಸೈಟ್ ಹ್ಯಾಕ್ ಆಗಿದ್ದು, ಪೊಲೀಸ್ ಇಲಾಖೆ ಅದನ್ನು ಸರಿಪಡಿಸಿದೆ.
ಸೈಬರ್ ರಿವೇಂಜ್ ಆರ್ಮಿ ಹೆಸರಿನಲ್ಲಿ ಸೋಮವಾರ ರಾತ್ರಿ 10 ಗಂಟೆ ಸಮಯದಲ್ಲಿ ವೆಬ್‌ಸೈಟ್ ಹ್ಯಾಕ್ ಆಗಿರುವ ಕುರಿತು ಗ್ರೀಡ್ 91ನಿಂದ ಟ್ವೀಟ್ ಮಾಡಲಾಗಿತ್ತು. ಈ ಬಗ್ಗೆ ಎಚ್ಚೆತ್ತ ಮೈಸೂರು ಜಿಲ್ಲಾ ಪೊಲೀಸರು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಬಳಿಕ ವೆಬ್‌ಸೈಟ್ ಸರಿಪಡಿಸಿದ್ದಾರೆ. ಸೈಬರ್ ಪೊಲೀಸ್ ಠಾಣೆಗೆ ದೂರು ನೀಡುವ ಮೂಲಕ ಕಾನೂನು ರೀತಿ ಕ್ರಮ ವಹಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಪ್ರತಿಕ್ರಿಯಿಸಿ, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಸೈಬರ್ ತಜ್ಞರ ಜೊತೆ ಪರಿಶೀಲನೆ ಮಾಡಿ ನನಗೆ ಮಾಹಿತಿ ನೀಡಲು ತಿಳಿಸಿದ್ದೇನೆ ಎಂದಿದ್ದಾರೆ.