ಮೈಸೂರು: ರೈತರ ಸಮಸ್ಯೆಗಳನ್ನು ಆಲಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಮೈಸೂರು ರೈತರಿಂದ ಸಚಿವ ಎಸ್.ಟಿ.ಸೋಮಶೇಖರ್ ಕಾರಿಗೆ ಮುತ್ತಿಗೆ - Siege of Minister ST Somashekhar's car
ಮೈಸೂರು ನಗರದಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರಿಗೆ ರೈತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ರೈತರಿಂದ ಸಚಿವ ಎಸ್.ಟಿ.ಸೋಮಶೇಖರ್ ಕಾರಿಗೆ ಮುತ್ತಿಗೆ
ನಗರದಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸುತ್ತಿದ್ದ ವೇಳೆ ಸಚಿವರನ್ನು ರೈತರು ತಡೆಯುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ರೈತರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಇದಕ್ಕೆ ಬಗ್ಗದ ರೈತರು ಮಾತಿನ ಚಕಮಕಿ ನಡೆಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಅಲ್ಲದೆ ಸೆ. 19 ಆದರೂ ರೈತರ ಸಮಸ್ಯೆ ಕೇಳಲು ಬಂದಿಲ್ಲವೆಂದು ಸಚಿವರ ವಿರುದ್ಧ ರೈತ ಮುಖಂಡರು ಕಿಡಿಕಾರಿದರು. ನಂತರ ಎಪಿಎಂಸಿ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ರೈತರ ಇತರೆ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ನಡೆಸಲು ಸಚಿವರು ಭರವಸೆ ನೀಡಿ ಹೊರಟು ಹೋದರು.
TAGGED:
ಮೈಸೂರು ಸುದ್ದಿ 2020