ಕರ್ನಾಟಕ

karnataka

ETV Bharat / state

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ - ಮೈಸೂರು ಸುದ್ದಿ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶದಲ್ಲಿ 6 ಮಂದಿ ದುಷ್ಕರ್ಮಿಗಳು ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣದ ಮಾಹಿತಿ ಪಡೆಯಲು ಎಡಿಜಿಪಿ ಪ್ರತಾಪ್ ರೆಡ್ಡಿ ಸ್ಥಳಕ್ಕಾಗಮಿಸಿದ್ದಾರೆ.

mysore
ಮೈಸೂರು ಗ್ಯಾಂಗ್ ರೇಪ್ ಪ್ರಕರಣ

By

Published : Aug 26, 2021, 11:13 AM IST

Updated : Aug 26, 2021, 11:29 AM IST

ಮೈಸೂರು: ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳ ಪರಿಶೀಲನೆ ಮಾಡಲು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮಿಸಿದ್ದಾರೆ.

ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶದಲ್ಲಿ 6 ಮಂದಿ ಕಿರಾತಕರು ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಆಗಮಿಸಿರುವ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾಹಿತಿ ನೀಡುತ್ತಿದ್ದಾರೆ.

ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮನ

ಆರೋಪಿಗಳ ಸುಳಿವು ಸಿಗದ ಕಾರಣ ಮತ್ತಷ್ಟು ಸಾಕ್ಷಿ ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು, ಘಟನಾ ಸ್ಥಳದ ದೂರದಲ್ಲಿ ಬಿಯರ್ ಬಾಟಲ್​ಗಳು ಬಿದ್ದಿರುವುದರಿಂದ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತಮುತ್ತಲು ಇರುವ ವೈನ್​ಶಾಪ್​ಗಳ ಸಿಸಿಟಿವಿ ವಿಡಿಯೋ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದೀಗ ಶೂಟ್ ಔಟ್ ಹಾಗೂ ಗ್ಯಾಂಗ್​ರೇಪ್ ಪ್ರಕರಣದಿಂದ ಪೊಲೀಸರಿಗೆ ಒತ್ತಡ ಹೆಚ್ಚಾಗಿದೆ.

Last Updated : Aug 26, 2021, 11:29 AM IST

ABOUT THE AUTHOR

...view details