ಮೈಸೂರು :ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐದು ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ಆ.24ರಂದು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ 7 ಮಂದಿ ಆರೋಪಿಗಳ ಪೈಕಿ ಆರು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ತೀವ್ರ ವಿಚಾರಣೆ ಬಳಿಕ ಇಂದು ಪೊಲೀಸರು ಆರೋಪಿಗಳನ್ನ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಓದಿ-ಮೈಸೂರು ಗ್ಯಾಂಗ್ರೇಪ್ ಪ್ರಕರಣ:ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಸಾಧ್ಯತೆ
ಆರು ಮಂದಿ ಬಂಧಿತರಲ್ಲಿ ಐವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ, ಮತ್ತೋರ್ವ ಬಾಲಪರಾಧಿಯಾಗಿದ್ದಾನೆ. ಏಳನೇ ಆರೋಪಿಯನ್ನು ಇಂದು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.
7ನೇ ಆರೋಪಿ ಬಂಧನ:
ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು ರಾತ್ರಿ ಕರೆತಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.