ಕರ್ನಾಟಕ

karnataka

ETV Bharat / state

ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ, ಪತಿಗೂ ಕೊರೊನಾ ದೃಢ - ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡಗೆ ಕೋವಿಡ್​

ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ, ಅವರ ಪತಿಗೂ ಕೊರೊನಾ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

mysore-mayor-tested-corona-positive
ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ, ಪತಿಗೂ ಕೊರೊನಾ ದೃಢ

By

Published : Apr 1, 2021, 11:37 PM IST

ಮೈಸೂರು:ಮೇಯರ್ ರುಕ್ಮಿಣಿ ಮಾದೇಗೌಡ ಹಾಗೂ ಅವರ ಪತಿ ಮಾದೇಗೌಡ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮಾ.30ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಮೇಯರ್ ರುಕ್ಮಿಣಿ ಮಾದೇಗೌಡ ಅವರು, ಮಾ.31ರಂದು ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ಇವರ ಸಂಪರ್ಕದಲ್ಲಿದ್ದ ಪತಿ ಮಾದೇಗೌಡ ಅವರಿಗೆ ಕೊರೊನಾ ಸೋಂಕು ಆವರಿಸಿದೆ.

ಮೇಯರ್ ರುಕ್ಮಿಣಿ ಮಾದೇಗೌಡ ಅವರು, ಮಾ.30ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇವರ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರುವಾಗಿದೆ.

ABOUT THE AUTHOR

...view details