ಮೈಸೂರು:ನಗರದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಪಾಲಿಕೆಯಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಡೇಟಾ ಎಂಟ್ರಿ ಆಪರೇಟರ್ಗಳ ತಾತ್ಕಾಲಿಕ ಹುದ್ದೆಗಳ ನೇಮಕಕ್ಕೆ ಪಾಲಿಕೆಯಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಮೈಸೂರು: ಕೋವಿಡ್ ಪರೀಕ್ಷೆ ನಡೆಸುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ - apply of temporary covid testing department
ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಮಾಡಿದೆ.
ಮೈಸೂರು ಪಾಲಿಕೆ
ನಗರದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಖಾಲಿ ಇರುವ 20 ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ 20 ಡೇಟಾ ಎಂಟ್ರಿ ಆಪರೇಟರ್ಗಳ ತಾತ್ಕಾಲಿಕ ಹುದ್ದೆಗಳ ನೇಮಕಕ್ಕೆ ಆಹ್ವಾನ ನೀಡಿದ್ದು , ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಡನೆ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದೆಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.