ಮೈಸೂರು :ಸ್ವಚ್ಛತೆಗೆ ಆದ್ಯತೆ ನೀಡಿ ಮತ್ತೆ ಸ್ವಚ್ಛ ನಗರಿ ಪ್ರಶಸ್ತಿ ಪಡೆಯಲು ಶ್ರಮಿಸುತ್ತೇನೆ ಎಂದು ಮೈಸೂರು ನೂತನ ಬಿಜೆಪಿ ಮೇಯರ್ ಸುನಂದಾ ಪಾಲನೇತ್ರ ಹೇಳಿದರು.
ಪಾಲಿಕೆಯ ಕಚೇರಿಯಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಮೇಯರ್ ಸ್ಥಾನದಿಂದ ವಂಚಿತರಾಗಿ ಕಣ್ಣೀರಿಟ್ಟಿದ್ದು, ಈ ಬಾರಿ ಮೇಯರ್ ಆಗಿ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ. ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.