ಕರ್ನಾಟಕ

karnataka

ETV Bharat / state

ಸೆ.26 ರಿಂದ ಅ.5ರ ವರೆಗೆ ಫಲಪುಷ್ಪ ಪ್ರದರ್ಶನ: ಇಲ್ಲೂ ರಾರಾಜಿಸಲಿದ್ದಾರೆ ಪವರ್ ಸ್ಟಾರ್

2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ನಲ್ಲಿ ಸೆ.26 ರಿಂದ ಅ.5ರ ವರೆಗೆ ಆಯೋಜಿಸಲಾಗಿದೆ. ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ, ಗುಲಾಬಿ ಹಾಗೂ ಸೇವಂತಿಗೆ ಹೂವುಗಳಿಂದ ಸುಮಾರು 20 ಅಡಿ ಎತ್ತರದ ಗಾಜಿನ ಮನೆಯಲ್ಲಿ ನಿರ್ಮಿಸಲಾಗುತ್ತಿದ್ದು, ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಅಪ್ಪು ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಯನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.

By

Published : Sep 24, 2022, 1:41 PM IST

mysore palace flower show
ಫಲಪುಷ್ಪ ಪ್ರದರ್ಶನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ನಲ್ಲಿ ಸೆ.26 ರಿಂದ ಅ.5ರ ವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್ ತಿಳಿಸಿದರು.

ಫಲಪುಷ್ಪ ಪ್ರದರ್ಶನಕ್ಕೆ ತಯಾರಿ

ಕುಪ್ಪಣ್ಣ ಪಾರ್ಕ್​ನಲ್ಲಿ ಇಂದು ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ, ಗುಲಾಬಿ ಹಾಗೂ ಸೇವಂತಿಗೆ ಹೂವುಗಳಿಂದ ಸುಮಾರು 20 ಅಡಿ ಎತ್ತರದ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಅಪ್ಪು ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಯನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು. ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ ಅನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗುತ್ತದೆ ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ತಯಾರಿ
ಫಲಪುಷ್ಪ ಪ್ರದರ್ಶನಕ್ಕೆ ತಯಾರಿ

ಇದನ್ನೂ ಓದಿ:ಝಗಮಗಿಸುವ ವಿದ್ಯುತ್ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಿದ ಗಜಪಡೆ

7 ಅಡಿ ಜೇನುಹುಳು, 12 ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು. ಇತರೆ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್​ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಫಲಪುಷ್ಪ ಪ್ರದರ್ಶನದ ತಯಾರಿ

ಇದನ್ನೂ ಓದಿ:ಯುವ ದಸರಾ ಸಂಭ್ರಮ ಹೆಚ್ಚಿಸಲಿರುವ ಸುದೀಪ್​​... ಅಪ್ಪು ನಮನ ಕಾರ್ಯಕ್ರಮಕ್ಕೆ ಒಂದು ದಿನ ಮೀಸಲು!

ಇಲಾಖೆಯಿಂದ 50 ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆಸಿದ್ದು, ಇಡೀ ಕುಪ್ಪಣ್ಣ ಪಾರ್ಕ್ ಅನ್ನು ಹೂವುಗಳಿಂದ ಅಲಂಕರಿಸಲಾಗುವುದು. ಅವುಗಳಲ್ಲಿ ಮುಖ್ಯವಾಗಿ ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ, ಇಲಾಖೆಗೆ ಸಂಬಂಧಿಸಿದ ಮಳಿಗೆಗಳು, ಸಾವಯವ ಮಳಿಗೆಗಳು, ಕೃಷಿಗೆ ಸಂಬಂಧಿಸಿದ ಮಳಿಗೆಗಳು, ಐಐಹೆಚ್​ಆರ್, ಸಿಡಿಬಿ, ಎನ್ ಹೆಚ್ ಬಿ, ಸಿಎಫ್ ಟಿಆರ್ ಐ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಇದನ್ನೂ ಓದಿ:ಮೈಸೂರು ದಸರಾ 2022: ಅರಮನೆ ಆವರಣದಲ್ಲಿ ಏಳು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ

ಮಾಧ್ಯಮಗೋಷ್ಟಿಯಲ್ಲಿ ದಸರಾ ಉಪಸಮಿತಿಯ ಫಲಪುಷ್ಪ ಪ್ರದರ್ಶನ ಸಮಿತಿಯ ಅಧ್ಯಕ್ಷ ಎಸ್.ಆರ್.ನಂಜಪ್ಪ, ಉಪಾಧ್ಯಕ್ಷರಾದ ಓಂ ಶ್ರೀನಿವಾಸ, ಸುಶೀಲಾ ಮತ್ತಿತರು ಉಪಸ್ಥಿತರಿದ್ದರು.

ABOUT THE AUTHOR

...view details