ಕರ್ನಾಟಕ

karnataka

ETV Bharat / state

ವಿಶ್ವವಿಖ್ಯಾತ ಮೈಸೂರು ಅರಮನೆ‌ ಪ್ರವಾಸಿಗರಿಗೆ ಮುಕ್ತ..! - ಮೈಸೂರು ಅರಮನೆ

ಮೈಸೂರು ಅರಮನೆಯಲ್ಲಿ ರಾಜಮನೆತನದ ಒಂಟೆಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು.

Mysore Palace open to tourists
ವಿಶ್ವವಿಖ್ಯಾತ ಮೈಸೂರು ಅರಮನೆ‌ ಪ್ರವಾಸಿಗರಿಗೆ ಮುಕ್ತ

By

Published : Jul 13, 2020, 11:54 PM IST

ಮೈಸೂರು:ಅರಮನೆ ಒಳಗಡೆಯ ವ್ಯಕ್ತಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ, 3 ದಿನ ಬಂದ್ ಆಗಿದ್ದ ಮೈಸೂರು ಅರಮನೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತವಾಗಿದೆ.

ಮೈಸೂರು ಅರಮನೆಯಲ್ಲಿ ರಾಜಮನೆತನದ ಒಂಟೆಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರದಿಂದ ಮೈಸೂರು ಅರಮನೆಯನ್ನು 3 ದಿನಗಳ ಕಾಲ ಬಂದ್ ಮಾಡಲಾಗಿತ್ತು.

ವಿಶ್ವವಿಖ್ಯಾತ ಮೈಸೂರು ಅರಮನೆ‌ ಪ್ರವಾಸಿಗರಿಗೆ ಮುಕ್ತ

ಅರಮನೆಯ ಒಳಗಡೆ ಔಷಧಿ ಸಿಂಪಡಣೆ ಮಾಡಿದ ನಂತರ ಇಂದಿನಿಂದ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ತಿಳಿಸಿದರು.

ABOUT THE AUTHOR

...view details