ಮೈಸೂರು: ವಿವಾಹ ವಾರ್ಷಿಕೋತ್ಸವದಂದೇ ಕೋವಿಡ್-19ಗೆ ಕಾನ್ಸ್ಟೇಬಲ್ ಬಲಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿವಾಹ ವಾರ್ಷಿಕೋತ್ಸವದಂದೇ ಕೋವಿಡ್ಗೆ ಬಲಿಯಾದ ಕಾನ್ಸ್ಟೇಬಲ್! - ಚಾಮರಾಜನಗರ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಕೋವಿಡ್ಗೆ ಬಲಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಪೊಲೀಸ್ ಕಾನ್ಸ್ಟೇಬಲ್ ಕೋವಿಡ್ಗೆ ಬಲಿಯಾಗಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ಆಗಸ್ಟ್ 12ರಂದು ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ನಲ್ಲಿ ಕೊರೊನಾ ಇರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ಐಸೋಲೇಷನ್ನಲ್ಲಿದ್ದ. ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನು ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ಕುಟುಂಬ ದುಃಖದ ಮಡುವಿನಲ್ಲಿದೆ.