ಮೈಸೂರು:ಮೈಸೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಸರಿಯಾಗಿ ಪಾಠ ಪ್ರವಚನ ನಡೆಯದ ಕಾರಣ ಪದವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಎಐಡಿಎಸ್ಒ ಸಂಘಟನೆ, ಮೈಸೂರಿನ ಕ್ರಾಫರ್ಡ್ ಹಾಲ್ ಬಳಿ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ವಿ.ಶೈಲಜಾ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ, ಪ್ರವಚನಗಳು ನಡೆದಿಲ್ಲ, ಹೀಗಾಗಿ ಪದವಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಎಐಡಿಎಸ್ಒ ಸಂಘಟನೆ ಮೈಸೂರಿನ ಕ್ರಾಫರ್ಡ್ ಹಾಲ್ ಬಳಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಸದ್ಯ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಮೈಸೂರು ವಿವಿ ಇಂದು ಬೆಳಗ್ಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆಯಾದ ವಿ.ಶೈಲಜಾ ಪದವಿ ಪರೀಕ್ಷೆಗಳನ್ನು ಆಗಸ್ಟ್ 1ಕ್ಕೆ ಮುಂದೂಡಿಕೆ ಮಾಡಿ ಆದೇಶಿಸಿರುವುದಾಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.