ಮೈಸೂರು:ರಾಜ್ಯ ಸರ್ಕಾರದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಯೋಜನೆ ಅಡಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 10 ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದೆ.
10 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಮೈಸೂರು ವಿಶ್ವವಿದ್ಯಾನಿಲಯ - mysore University news
ಮೈಸೂರು ವಿಶ್ವವಿದ್ಯಾನಿಲಯವು 10 ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ದತ್ತು ಸ್ವೀಕಾರ ಪತ್ರ ವಿತರಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ದತ್ತು ಸ್ವೀಕಾರ ಪತ್ರ ವಿತರಿಸಲಾಗಿದೆ.
ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ (ಶತಮಾನಕಂಡ ಶಾಲೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಳಂದೂರು ತಾಲೂಕಿನ ಕೊಮಾರನಸಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹನೂರು ತಾಲೂಕಿನ ಬೈಲೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಂಡ್ಯ ತಾಲೂಕಿನ ಯಲೇಚಿಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಳೆ ನರಸೀಪುರ ತಾಲೂಕಿನ ಯಲ್ಲೇಶಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈಸೂರು ತಾಲೂಕಿನ ಮಾರ್ಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಗ್ರಾಲ್ ಛತ್ರ ಸರ್ಕಾರಿ ಪ್ರೌಢ ಶಾಲೆ, ಕೆ.ಆರ್.ಮಿಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ದತ್ತು ಸ್ವೀಕಾರ ಮಾಡಲಾಗಿದೆ.