ಮೈಸೂರು:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಮೈಸೂರು ವಿಶ್ವವಿದ್ಯಾನಿಲಯ ದಿನ ನಿಗದಿ ಮಾಡಿದೆ.
ಮೈಸೂರು ವಿಶ್ವವಿದ್ಯಾನಿಲಯವು ಏ.11ರಂದು ಕೆ-ಸೆಟ್ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಕಾರಣಾಂತರಗಳಿಂದ ಪರೀಕ್ಷೆ ಮುಂದೂಡಲಾಗಿತ್ತು.

ಇದೀಗ ಏ.25ರಂದು ಕೆ-ಸೆಟ್ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು, ನಗರ ಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಪರೀಕ್ಷೆಯ ಸಂಯೋಜನಾಧಿಕಾರಿ ಪ್ರೊ.ರಾಜಶೇಖರ್ ಕೋರಿದ್ದಾರೆ.
ಇದನ್ನೂ ಓದಿ:ಪುರಾತತ್ವ ಇಲಾಖೆಯಡಿ ಬರುವ ಎಲ್ಲಾ ಸ್ಮಾರಕಗಳು ಮೇ 15ರವರೆಗೆ ಬಂದ್