ಮೈಸೂರು: ಕೊರೊನಾ ಸೋಂಕು ತಗುಲಿ, ಗುಣಮುಖರಾದ ಬಳಿಕ ಹೆಡ್ ಕಾನ್ಸ್‌ಟೇಬಲ್ ವೊಬ್ಬರು ಮತ್ತೊಬ್ಬರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಪ್ಲಾಸ್ಮಾ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪ್ಲಾಸ್ಮಾ ದಾನ ಮಾಡಿದ ಹೆಡ್ ಕಾನ್ಸ್‌ಟೇಬಲ್ ಅಭಿನಂದಿಸಿದ ಜಿಲ್ಲಾ ವರಿಷ್ಠಾಧಿಕಾರಿ
ಕೊರೊನಾದಿಂದ ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಿ ಮಾನವೀಯತೆ ಮೆರೆದ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಕಚೇರಿಗೆ ಕರೆಯಿಸಿ ಸನ್ಮಾನಿಸಿದರು.
ನಂಜನಗೂಡು ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮೋಹನ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇದೀಗ ಮತ್ತೆ ಕರ್ತವ್ಯಕ್ಕೆ ಮರಳಿದ್ದಾರೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಕೋವಿಡ್ ನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸಿದ ಮೋಹನ್ ಅವರು, ಕೊರೊನಾದಿಂದ ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಈ ವಿಷಯ ತಿಳಿದ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಮೋಹನ್ ಅವರನ್ನು ಕಚೇರಿಗೆ ಕರೆಯಿಸಿ ಸನ್ಮಾನಿಸಿದ್ದಾರೆ.