ಮೈಸೂರು: ಕೊರೊನಾ ಸೋಂಕಿಗೆ ಬ್ಯಾಂಕ್ ನೌಕರರೊಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ಕೊರೊನಾ ಸೋಂಕಿಗೆ ನಂಜನಗೂಡು ಇಂಡಿಯನ್ ಬ್ಯಾಂಕ್ ನೌಕರ ಬಲಿ - Bank employee death news
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಂಜನಗೂಡು ಪಟ್ಟಣದ ಇಂಡಿಯನ್ ಬ್ಯಾಂಕ್ ನೌಕರರೊಬ್ಬರು ಇಂದು ಮೃತಪಟ್ಟಿದ್ದಾರೆ.
Corona
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಂಜನಗೂಡು ಪಟ್ಟಣದ ಇಂಡಿಯನ್ ಬ್ಯಾಂಕ್ ನೌಕರರೊಬ್ಬರು ಇಂದು ಮೃತಪಟ್ಟಿದ್ದಾರೆ.
ಕಳೆದ 10 ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂಡಿಯನ್ ಬ್ಯಾಂಕ್ ಅನ್ನು ಸೀಲ್ ಡೌನ್ ಮಾಡಲಾಗಿತ್ತು. ನಂತರ ಸೋಂಕಿತರಿಗೆ ಮೈಸೂರಿನ ಜೆಎಸ್ಎಸ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ನೌಕರ ಸಾವನ್ನಪ್ಪಿದ್ದು, ಇವರ ಅಂತ್ಯಕ್ರಿಯೆ ಕೋವಿಡ್ ಮಾರ್ಗಸೂಚಿಯಂತೆ ನೇರವೇರಲಿದೆ.